ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಬಿಡುವು ಪಡೆದಿದ್ದ ಮಳೆರಾಯ ಇದೀಗ ಮತ್ತೆ ಎಂಟ್ರಿ ಕೊಡಲು ಸಿದ್ದನಾಗಿದ್ದಾನೆ. ಹೌದುದೆ. ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ.
ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ನೀಡಲಾಗಿದೆ.
ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯಾಗಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನೂ, ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಇಂದಿನಿಂದ ನವೆಂಬರ್ 13ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
BIGG NEWS : ‘ಕಬ್ಬು’ ಬೆಳೆಗಾರರಿಗೆ ಸಿಹಿಸುದ್ದಿ : ಶೀಘ್ರವೇ ರಾಜ್ಯ ಸರ್ಕಾರದಿಂದ ‘FRP’ ದರ ನಿಗದಿ
BIGG NEWS : ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ : ರಾಜ್ಯ ಸರ್ಕಾರದಿಂದ ಆದೇಶ