ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದ. ಭಾರತದ ನಾಲ್ಕು ರಾಜ್ಯಗಳಿಗೆ 2 ದಿನ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
25,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲು ಇಂದಿನಿಂದ ನಾಲ್ಕು ದಕ್ಷಿಣದ ರಾಜ್ಯಗಳಿಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಮೋದಿ ಅವರು ನವೆಂಬರ್ 11 ಮತ್ತು 12 ರಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಮೋದಿ ಅವರು ಬೆಂಗಳೂರಿಗೆ ಆಗಲಿಸಲಿದ್ದು, ಬೆಳಿಗ್ಗೆ 10:20 ರ ಸುಮಾರಿಗೆ ಅವರು ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಲಿದ್ದಾರೆ.
ನಂತ್ರ, ಬೆಳಗ್ಗೆ 11:30ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ನಂತರ 12:30 ಗಂಟೆಗೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3:30 ರ ಸುಮಾರಿಗೆ ತಮಿಳುನಾಡಿನ ದಿಂಡಿಗಲ್ನಲ್ಲಿರುವ ಗಾಂಧಿಗ್ರಾಮ್ ರೂರಲ್ ಇನ್ಸ್ಟಿಟ್ಯೂಟ್ನ 36 ನೇ ಘಟಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ನವೆಂಬರ್ 12 ರಂದು ಬೆಳಿಗ್ಗೆ 10:30 ರ ಸುಮಾರಿಗೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಪ್ರಧಾನ ಮಂತ್ರಿಗಳು ಬಹುವಿಧದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ತೆಲಂಗಾಣದ ರಾಮಗುಂಡಂನಲ್ಲಿರುವ ಆರ್ಎಫ್ಸಿಎಲ್ ಘಟಕಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ರಾಮಗುಂಡಂನಲ್ಲಿ ಪ್ರಧಾನ ಮಂತ್ರಿಗಳು ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
‘ಮುರುಘಾ ಶ್ರೀ’ಗಳ ಪೋಕ್ಸೋ ಪ್ರಕರಣ : ಸಂತ್ರಸ್ತ ಬಾಲಕಿಗೆ ಕುಮ್ಮಕ್ಕು ನೀಡಿದ ಆರೋಪಿ ಶಿಕ್ಷಕ ಅರೆಸ್ಟ್
BIG NEWS: UPI ಮೂಲಕ ಭಾರತ-ಸಿಂಗಪುರ ನಡುವೆ ಹಣ ವರ್ಗಾವಣೆ ಶೀಘ್ರದಲ್ಲೇ ಪ್ರಾರಂಭ: ಭಾರತೀಯ ರಾಯಭಾರಿ
‘ಮುರುಘಾ ಶ್ರೀ’ಗಳ ಪೋಕ್ಸೋ ಪ್ರಕರಣ : ಸಂತ್ರಸ್ತ ಬಾಲಕಿಗೆ ಕುಮ್ಮಕ್ಕು ನೀಡಿದ ಆರೋಪಿ ಶಿಕ್ಷಕ ಅರೆಸ್ಟ್