ಬೆಂಗಳೂರು : ದಕ್ಷಿಣ ಭಾರತದ ಮೊಟ್ಟಮೊದಲ ವಂದೆ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಇಂದು ಪ್ರಧಾನಿ ಮೋದಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಫ್ಲಾಟ್ ಫಾರ್ಮ್ ನಂ.7ಅಲ್ಲಿ ಹಸಿರು ನಿಶಾನೆ ನೀಡಿದರು. ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ.
ಮೋದಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಕೂಡ ಆಗಮಿಸಿದ್ದರು. ಮೋದಿ ಚಾಲನೆ ನೀಡಿದ ಬಳಿಕ ರೈಲು ಚೆನ್ನೈ ಕಡೆ ಪ್ರಯಾಣ ಬೆಳೆಸಿತು. ಮೊದಲಿಗೆ ಟ್ರೇನ್-18 ಎಂದು ನಾಮಕರಣ ಮಾಡಲಾಗಿತ್ತು. ನಂತರ ವಂದೇ ಭಾರತ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ,. ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸಿ.ಹೆಚ್ ಪ್ರತಾಪ್ ರೆಡ್ಡಿ ಅವರೇ ಭದ್ರತೆಯ ಉಸ್ತುವಾರಿ ವಹಿಸಲಿದ್ದು, ಇವರ ಮಾರ್ಗದರ್ಶನದಲ್ಲಿ ಹೆಚ್ಚವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ ಪೊಲೀಸ್ ಆಯುಕ್ತ ಬಿ.ಆರ್ ರವಿಕಾಂತೇಗೌಡ , ರಮಣಗುಪ್ತ ಸೇರಿದಂತೆ ಐವರು ಡಿಸಿಪಿಗಳು ಭದ್ರತೆ ಜವಾಬ್ದಾರಿ ವಹಿಸಲಿದ್ದಾರೆ.
BIG NEWS: ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಭಾರತೀಯ ಮೂಲದ 23 ವರ್ಷದ ʻನಬೀಲಾ ಸೈಯದ್ʼ | Nabeela Syed
BIG NEWS: ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಭಾರತೀಯ ಮೂಲದ 23 ವರ್ಷದ ʻನಬೀಲಾ ಸೈಯದ್ʼ | Nabeela Syed