ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
‘ಟಿಪ್ಪು ಜಯಂತಿ’ ಆಚರಣೆ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ಮುಖಂಡರು |Tippu Jayanthi
ಇದೀಗ ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದು, ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಕೆಲವೇ ಕ್ಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ, ಸಭೆಯಲ್ಲಿ ಸಿಎಂ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲನಾಂದನಾಥಮಹಾ ಸ್ವಾಮೀಜಿ ಮತ್ತಿತರರಿದ್ದಾರೆ. ಪ್ರಧಾನಿ ಮೋದಿ ಸಮಾವೇಶಕ್ಕೆ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ್ ಮೋದಿ ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದಿದ್ದಾರೆ. ಬೆಂಗಳೂರಿನ ವಿಶೇಷ ಕಾರ್ಯಕ್ರಮಕ್ಕೆ ಬಂದಿದ್ದು ನನ್ನ ಸೌಭಾಗ್ಯ . ಇಂದು ಪೂಜ್ಯ ಸ್ವಾಮೀಜಿ ನನಗೆ ಅಶೀರ್ವಾದ ನೀಡಿದ್ದಾರೆ. ಅವರಿಗೆ ನಾನು ಅಭಾರಿಯಾಗಿದ್ದೇನೆ.
‘ಟಿಪ್ಪು ಜಯಂತಿ’ ಆಚರಣೆ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ಮುಖಂಡರು |Tippu Jayanthi
ಇಂದು ಕರ್ನಾಟಕಕ್ಕೆ ಮೇಡ್ ಇನ್ ಇಂಡಿಯಾ ರೈಲು ಸಿಕ್ಕಿದೆ ಕರ್ನಾಟಕಕ್ಕೆ ವಂದೇ ಭಾರತ್ ರೈಲು ದೊರಕಿದೆ. ಟರ್ಮಿನಲ್ 2 ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದೇನೆ ಇಲ್ಲಿ ಬಂದು ನೋಡಿದಾಗ ಫೋಟೋ ಗಿಂತ ಬಹಳ ಸುಂದರವಾಗಿದೆ.
ಕರ್ನಾಟಕಕ್ಕೆ ಇಂದು ಮೊದಲ ಬಾರಿಗೆ ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲು ಸಿಕ್ಕಿದೆ. ದೇಶದ ಸ್ಟಾರ್ಟ್ ಅಪ್ ಕ್ಯಾಪಿಟಲ್ ಬೆಂಗಳೂರನ್ನು ಚೆನ್ನೈ ಹಾಗೂ ಮೈಸೂರಿನೊಂದಿಗೆ ಜೋಡಿಸುತ್ತದೆ ಎಂದು ಹೇಳಿದರು.
ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಕೆಂಪೇಗೌಡರ ಚಿಂತನೆಗಳು ಭವಿಷ್ಯದ ಕರ್ನಾಟಕ, ಭಾರತ ಹೇಗಿರಬೇಕು ಎಂಬ ಬಗ್ಗೆ ಪ್ರೇರಣೆ ನೀಡುತ್ತದೆ. ಭಾರತದ ಭವಿಷ್ಯಕ್ಕೆ ಸ್ಟಾರ್ಟ್ಅಪ್ ಮುಖ್ಯ. ಅದಕ್ಕೆ ಬೆಂಗಳೂರು ಬಹುದೊಡ್ಡ ಕೊಡುಗೆ ನೀಡುತ್ತದೆ.
‘ಟಿಪ್ಪು ಜಯಂತಿ’ ಆಚರಣೆ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ಮುಖಂಡರು |Tippu Jayanthi
ಸ್ಟಾರ್ಟ್ಅಪ್ ಎನ್ನುವುದು ಒಂದು ಕಂಪನಿಯಿಂದ ಆಗುವುದಿಲ್ಲ. ಅದೊಂದು ಮನೋಭಾವ, ಸಮಗ್ರ ಪ್ರಯತ್ನದ ಫಲ. ಬೆಂಗಳೂರು ಭಾರತದ ಭವಿಷ್ಯಕ್ಕೆ ಅತ್ಯಂತ ಮುಖ್ಯ ನಗರ. ಬೆಂಗಳೂರು ಭಾರತದ ಯುವಶಕ್ತಿಯ ಪ್ರತೀಕವಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ಕೇವಲ ಒಂದು ರೈಲು ಮಾತ್ರವೇ ಅಲ್ಲ. ಅದು ಹೊಸ ಭಾರತದ ಹೊಸ ಮೈಲಿಗಲ್ಲು. ಮುಂದಿನ ದಿನಗಳಲ್ಲಿ ಭಾರತದ ರೈಲುಗಲು ಹೇಗಿರಲಿವೆ ಎಂಬುದರ ಒಂದು ಝಲಕ್ ಅಷ್ಟೇ ಎಂದರು.