ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ಗೆ ನಿಜವಾದ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ( Union Minister Pralhad Joshi ) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವರು, ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ಗೆ ನಿಜವಾದ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ ಚುನಾವಣೆಗಳು ಬಂದಾಗ ಮಾತ್ರ ಕಾಂಗ್ರೆಸ್ ಪಕ್ಷ ಹಿಂದೂ ಧರ್ಮದ ಬಗ್ಗೆ ಮಾತಾಡುವ ಚಾಳಿ ಬಿಡಲಿ, ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳ ಬಗ್ಗೆ ನಿಜವಾದ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಪ್ರಲ್ಹಾದ್ ಜೋಶಿ ಸವಾಲ್ ಎಸೆದರು.
ನೀವು ಬರೆದಿಟ್ಟುಕೊಳ್ಳಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ( Congress Party ) ಅಧಿಕಾರಕ್ಕೆ ಬರುವುದಿಲ್ಲ. ನಿನ್ನೆಯ ಮೋದಿ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಬಂದಿದ್ದರು. ಇದನ್ನು ನೋಡಿ ಕಾಂಗ್ರೆಸ್ ಪಕ್ಷದವರು ಥಂಡಾ ಹೊಡೆದಿದ್ದಾರೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ( Union Minister Pralhad Joshi ) ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದಿಲ್ಲ. ಸಿಎಂ ಆಗಬೇಕೆಂದು ಸಿದ್ಧರಾಮಯ್ಯ( Siddaramaiah ), ಡಿಕೆ ಶಿವಕುಮಾರ್ ( DK Shivakumar ) ಬಡಿದಾಡುತ್ತಿದ್ದಾರೆ. ಪಾಪ ಅದನ್ನು ಸರಿ ಮಾಡೋದಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ ಎಂದರು.ನೀವು ಬರೆದಿಟ್ಟುಕೊಳ್ಳಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದಿಲ್ಲ. ನಿನ್ನೆ ಮೋದಿ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಬಂದಿದ್ದಾರೆ. ಇದನ್ನು ನೋಡಿ ಕಾಂಗ್ರೆಸ್ ಥಂಡಾ ಹೊಡೆದಿದೆ. ಕೈಯಲ್ಲಿ ಆಗದವರು ಮೈ ಪರಚಿಕೊಂಡರು ಅನ್ನೋ ಹಾಗೇ, ಸಿದ್ಧರಾಮಯ್ಯ ಟ್ವಿಟ್ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಯಾರಿಗೆ ಏನು ಹೇಳುತ್ತಾರೋ ಒಂದು ತಿಳಿಯೋದಿಲ್ಲ ಎಂದು ಹೇಳಿದರು.
BREAKING NEWS: ದೈವಾರಾಧನೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ದೂರು ದಾಖಲು