ಬೆಂಗಳೂರು: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರಿಂದ ಲೋಕಾರ್ಪಣೆ ಕಂಡ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ( Bronze statue ) ಜಾಗವು ಒಂದೇ ದಿನದಲ್ಲಿ ಆಕರ್ಷಕ ಪ್ರವಾಸಿ ತಾಣದಂತೆ ( Tourist Place ) ಜನರನ್ನು ತನ್ನತ್ತ ಸೆಳೆಯುತ್ತಿದೆ.
ಈ ಬಾರಿ ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧೆ? ಈ ಕುರಿತು ಹೇಳಿದ್ದೇನು ಗೊತ್ತಾ?
ಲೋಕಾರ್ಪಣೆಗೆ ಪೂರಕವಾಗಿ ನಡೆದ ಸಾರ್ವಜನಿಕ ಸಭೆಗೆ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಆಗಮಿಸಿದ್ದರು. ಆಶ್ಚರ್ಯವೆಂದರೆ ಕಾರ್ಯಕ್ರಮ ಮುಗಿದ ಮೇಲೂ ಸಾವಿರಾರು ಜನರು ತಂಡೋಪ ತಂಡವಾಗಿ ಪ್ರತಿಮೆಯನ್ನು ವೀಕ್ಷಿಸಲು ಆಗಮಿಸುತ್ತಿದ್ದರು.
ಲಘು, ಭಾರಿ ವಾಹನ ತರಬೇತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: BMTCಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಸಭೆ ಮುಗಿದ ಮೇಲೆ ಕುತೂಹಲವುಳ್ಳ ಜನರು ರಾತ್ರಿ ಎರಡು ಗಂಟೆಯಾದರೂ ಪ್ರತಿಮೆಯನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದರು. ಬಂದವರಿಗೆ ನಿರಾಸೆಯಾಗದಂತೆ ಪ್ರತಿಮೆಯ ವೀಕ್ಷಣೆಗೆ ಮುಕ್ತ ಅವಕಾಶ ನೀಡಲಾಗಿತ್ತು ಎಂದು ಸಚಿವ ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳುವವರ ಗಮನಕ್ಕೆ: ಇನ್ಮುಂದೆ ಅರೆನಗ್ನ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ