ಹಾಸನ : ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
10 ನೇ ತರಗತಿ ವಿದ್ಯಾರ್ಥಿನಿಯನ್ನು ಪದೇಪದೇ ಆಫಿಸ್ ರೂಂ ಕಸ ಗುಡಿಸಲು ಕರೆದು ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ. ಆರೋಪಿ ಶಿಕ್ಷಕನನ್ನು ಹೆಣ್ಣು ಮಕ್ಕಳ ಸಂಬಂಧಿಕರು ಥಳಿಸಿದ್ದು, ಮಧ್ಯ ಪ್ರವೇಶಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಗ್ರಾಮಕ್ಕೆ ತೆರಳಿ ವಿದ್ಯಾರ್ಥಿನಿಯ ಹೇಳಿಕೆ ಪಡೆದು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.