ಮೈಸೂರು: ಜಿಲ್ಲೆಯ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಿದರೆ ಒಡೆದು ಹಾಕುವುದು ಖಂಡಿತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ. ಈ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ.
BIGG NEWS: ಮುಂದಿನ ವಾರದಿಂದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ : ಹೆಚ್.ಡಿ ದೇವೇಗೌಡ
ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಭಾಷಣ ಮಾಡಿದ್ದಾರೆ.
ಇನ್ನು ಇದೇ ಭಾಷಣದಲ್ಲಿ ಜಾಫರ್ ಷರೀಪ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಎಸ್ ನಿಜಲಿಂಗಪ್ಪನವರ ಕಾರ್ ಡ್ರೈವರ್ ಆಗಿದ್ದ ಜಾಫರ್ ಶರೀಫ್, ರೈಲಿಗೆ ಟಿಪ್ಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿಸಿದ್ರು.