ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ( Karnataka State Road Transport Corporation – KSRTC ) ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆ. ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ( Accident Insurance Plan ) ಸೌಲಭ್ಯ ಜಾರಿಗೊಳಿಸಿದೆ. ಈಗಾಗಲೇ ರೂ 50 ಲಕ್ಷ ವಿಮೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾರವರಿಂದ ಹಾಗೂ ಇಂದು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಅವರಿಂದ ( United India Insurance ) ಮಾಡಿಕೊಂಡ ಒಡಂಬಡಿಕೆಯ ರೂ.50 ಲಕ್ಷ ಸೇರಿ, ಒಟ್ಟು ರೂ.1 ಕೋಟಿ ಅಪಘಾತ ವಿಮೆ ( Accident Insurance ) ಜಾರಿಗೊಳಿಸಿದೆ.
ಈ ಕುರಿತಂತೆ ಸಂಸ್ಥೆಯಿಂದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ನಿಗಮದ ಸಿಬ್ಬಂದಿಗಳು ( KSRTC Employees ) ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿರುತ್ತದೆ ಎಂದು ಹೇಳಿದೆ.
ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿಯೇ ಇಲ್ಲ- HDK ಕಿಡಿ
ಇದರ ಮುಂದುವರಿದ ಭಾಗವಾಗಿ, ಇಂದು ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು , ಅದರಂತೆ ಸಿಬ್ಬಂದಿಗಳಿಗೆ ರೂ.50 ಲಕ್ಷದವರೆಗೆ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿರುತ್ತದೆ. ಈ ವಿಮಾ ಯೋಜನೆಗೆ ಸಿಬ್ಬಂದಿಗಳು ಮಾಹೆಯಾನ ರೂ.62.50 + ಜಿ.ಎಸ್.ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.
ಈ ಸಂದರ್ಭದಲ್ಲಿ, ಮಾತನಾಡಿದ ನಿಗಮದ ಮಾನ್ಯ ಅಧ್ಯಕ್ಷರಾದ ಎಂ. ಚಂದ್ರಪ್ಪ ನವರು ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಅತ್ಯುತ್ತಮವಾದ ಯೋಜನೆಯಾಗಿದ್ದು, ಅಪಘಾತ (On duty ಮತ್ತು Off duty ಒಳಗೊಂಡಂತೆ ನೀಡಲಾಗುವ) ವಿಮಾ ಯೋಜನೆಯಾಗಿರುವುದು ಸಿಬ್ಬಂದಿಗಳಿಗೆ ಮತ್ತಷ್ಟು ಅನುಕೂಲವಾಗಲಿದೆಯೆಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಗೆ ತುಂಬು ಹೃದಯದ ಸಹಕಾರ ನೀಡಿದ ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಮುಖಂಡರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ ರವರ ಸಹಯೋಗವನ್ನು ಶ್ಲಾಘಿಸಿದರು.
ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಮಾನ್ಯ ಶಾಸಕರು ಹಾಗೂ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದಂತ ವಿ.ಅನ್ಬುಕುಮಾರ್, ಪ್ರಧಾನ ವ್ಯವಸ್ಥಾಪಕರಾದಂತ ಅಂಗ್ರೂಪ್ ಸೋನಂ, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ರವರು ಒಡಂಬಡಿಕೆಗೆ ಸಹಿ ಹಾಕಿದರು.
ಈ ಕಾರ್ಯಕ್ರಮದಲ್ಲಿ ಕೆಎಸ್ ಆರ್ ಟಿಸಿಯ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕರಾದಂತ ಡಾ. ನವೀನ್ ಭಟ್ ವೈ, ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರುಗಳಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಸಂಘಗಳ ಮುಖಂಡರುಗಳು , ಉಷಾ ಚಂದ್ರಮೌಳಿ, ಪ್ರಾದೇಶಿಕ ವ್ಯವಸ್ಥಾಪಕರು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ಬೆಂಗಳೂರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
BIG NEWS: ಕಲ್ಯಾಣ ಕರ್ನಾಟಕ ಭಾಗದಲ್ಲಿ 2 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ
ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳ 1 ಕೋಟಿ ಮೊತ್ತದ ಅಪಘಾತ ವಿಮಾ ಸೌಲಭ್ಯದ ಬಗ್ಗೆ ಸಂಕ್ಷಿಪ್ತ ಮಾಹಿತಿ
* ಈ ಯೋಜನೆಯಲ್ಲಿ ಸಿಬ್ಬಂದಿಗಳು ಪ್ರತಿ ಮಾಹೆ ರೂ.62.50 + ಜಿ ಎಸ್ ಟಿ ಸೇರಿ ಪ್ರೀಮಿಯಂ (ವಾರ್ಷಿಕ ರೂ.750+ ಜಿ.ಎಸ್.ಟಿ ಸೇರಿದಂತೆ ಒಟ್ಟು ರೂ.885/-) ಪಾವತಿಸಬೇಕಾಗುತ್ತದೆ.
* ಈ ವೈಯಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ. 50 ಲಕ್ಷಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.
* ಅಪಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗ ವೈಕಲ್ಯಕ್ಕೆ ತುತ್ತಾದಲ್ಲಿ ಸಹ ರೂ. 50 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.
* ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.
* ಒಂದು ವೇಳೆ ಸಿಬ್ಬಂದಿಯು ಅಪಘಾತಕ್ಕೆ ಒಳಗಾಗಿ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅಸಮರ್ಥನಾದ ಪಕ್ಷದಲ್ಲಿ, ಆತನು ಚೇತರಿಸಿಕೊಳ್ಳುವವರೆಗೆ, ಅವನಿಗೆ ವಿಮಾ ಮಾಡಲಾದ ರೂ.50 ಲಕ್ಷ ಮೊತ್ತದ ಶೇಕಡಾ ಒಂದರಷ್ಟು ಮೊತ್ತವನ್ನು ಪ್ರತಿವಾರ ರೂ.5000 ಕ್ಕೆ ಹೆಚ್ಚದಂತೆ ಅಥವಾ ಅವರ ಮಾಸಿಕ ಸಂಬಳದ ಶೇಕಡಾ 25ರಷ್ಟನ್ನು,ಯಾವುದು ಕಡಿಮೆಯೋ ಅದನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡುವುದು.
* ಈ ಎರಡು ವಿಮಾ ಯೋಜನೆಗಳಿಂದ ನಿಗಮವು ತನ್ನ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಂತಾಗಿದೆ. ಇಲ್ಲಿಯವರೆಗೂ ನಿಗಮದ ಸಿಬ್ಬಂದಿಗಳಿಗೆ ಯಾವುದೇ ಅಪಘಾತ ವಿಮಾ ಯೋಜನೆಯ ಸೌಲಭ್ಯವಿರಲಿಲ್ಲ.
*ಸಿಬ್ಬಂದಿಗಳು ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಇಂದು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ರವರೊಂದಿಗೆ ಮಾಡಿಕೊಂಡಿರುವುದು ಹಾಗೂ ಕೆಲ ದಿನಗಳಷ್ಟು ಹಿಂದೆಯಷ್ಟೇ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾರವರೊಡನೆ ಸಹಿ ಹಾಕಿರುವ ಒಡಂಬಂಡಿಕೆಯು ಕಾರ್ಮಿಕರ ಹಿತ ಕಾಪಾಡುವಲ್ಲಿ ಚರಿತಾರ್ಹವಾದ ಕ್ಷಣಕ್ಕೆ ಸಾಕ್ಷಿಯಾಗಿದೆ.