ಕೋಲ್ಕತಾ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ತಮ್ಮ ಸಚಿವರ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದಾರೆ. ವೈಯಕ್ತಿಕ ಟೀಕೆಗಳನ್ನ ಮಾಡುವುದು ತಮ್ಮ ಪಕ್ಷದ ಸಂಸ್ಕೃತಿಯಲ್ಲಿಲ್ಲ ಎಂದು ಹೇಳಿದ ಅವರು, ಅವರ ಹೇಳಿಕೆಗಳ ಬಗ್ಗೆ ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಪಕ್ಷವು ಕ್ಷಮೆಯಾಚಿಸಿದೆ ಎಂದು ಹೇಳಿದರು.
ತೃಣಮೂಲ ಸಚಿವ ಅಖಿಲ್ ಗಿರಿ ಅವರು ರಾಷ್ಟ್ರಪತಿಗಳ ಬಗ್ಗೆ ನೀಡಿದ ಅಸಹ್ಯಕರ ಹೇಳಿಕೆಗಳನ್ನ ವಿರೋಧಿಸಿ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕರು ಇಂದು ಮಧ್ಯಾಹ್ನ ರಾಜಭವನಕ್ಕೆ ಮೆರವಣಿಗೆ ನಡೆಸಿದರು. ಇನ್ನು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
BREAKING NEWS : ಖ್ಯಾತ ನಟ ‘ನಾಗಶೌರ್ಯ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು