ಕಲಬುರಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ನಿರ್ಮಾಣ ಹಾಗೂ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇಂದು ಸೋಮವಾರ ಕಲಬುರಗಿ ತಾಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಪನೆ ಸ್ಥಾಪನೆ ನೆರವೇರಿಸಿ ಮಾತನಾಡಿದರು.
ಈ ವರ್ಷ ರಾಜ್ಯದಲ್ಲಿ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ತಲಾ 15 ಲಕ್ಷ ರೂನಂತೆ ಅನುದಾನ ನೀಡಲಾಗಿದ್ದು, ಈ ಯೋಜನೆಯಲ್ಲಿ 1500 ಅಂಗನವಾಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.
ಒಟ್ಟು 8000 ಸಾವಿರ ಶಾಲಾ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಾಣ ವಾಗಲಿದ್ದು, ಸುಮಾರು ಆರು ಸಾವಿರ ಕೊಠಡಿಗಳ ನ್ನು ಕರ್ನಾಟಕದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ದೊಡ್ಡ ಕ್ರಾಂತಿಯಾಗಲಿದ್ದು ಇದನ್ನು ಮೂರು ವರ್ಷ ನಿರಂತರವಾಗಿ ಮಾಡಿದರೆ, ಕರ್ನಾಟಕದಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಕೊಠಡಿಗಳ ಮೂಲಸೌಕರ್ಯದ ಕೊರತೆ ನೀಗಲಿದೆ. ಅದರ ಜೊತೆಗೆ ಮುಂದಿನ ಆಗಸ್ಟ್ 15 ರೊಳಗೆ ಎಲ್ಲಾ ಸರ್ಕಾರಿ ಶಾಲೆಗಳ ಶೌಚಾಲಯ ಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಕ್ಕಾಗಿ 250 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಎರಡನೇ ಹಂತದ ನೇಮಕಾತಿಗೆ ಮುಂದಿನ ವಾರದಲ್ಲಿ ಅನುಮತಿ ನೀಡಲಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿದ್ದ ಕೊರತೆಯನ್ನು ಯಾವುದೇ ಸರ್ಕಾರ ಮುಟ್ಟಲೂ ಹೋಗಿರಲಿಲ್ಲ. ಆಮೂಲಾಗ್ರ ಬದಲಾವಣೆಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ತಂದು ಅಗತ್ಯವಿರುವ ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಗುಣಮಟ್ಟದ ಶಿಕ್ಷಣ ಕ್ಕಾಗಿ ಶಿಕ್ಷಕರ ತರಬೇತಿ ಹಾಗೂ ಪಠ್ಯ ಕ್ರಮದ ಬಗ್ಗೆ ಗಮನ ನೀಡಲಾಗಿದೆ. ಮುಂದಿನ ವರ್ಷ ನೂತನ ಶಿಕ್ಷಣ ನೀತಿಯನ್ನು ಪ್ರಾಥಮಿಕ ಶಿಕ್ಷಣ ದಲ್ಲಿಯೂ ಅನುಷ್ಠಾನಕ್ಕೆ ತರಲಾಗುವುದು ಎಂದರು.
ಬಾಡೂಟದಿಂದ ಮತಕ್ಷೇತ್ರಕ್ಕೆ ಮಾಡಿದ ವಂಚನೆ ಜನರು ಮರೆಯಲ್ಲ: ಸಚಿವ ಶ್ರೀರಾಮುಲು ವಿರುದ್ಧ ಡಾ.ಯೋಗೇಶ್ ಬಾಬು ಕಿಡಿ