ಹಾವೇರಿ : ಮನೆ ಮಂಜೂರು ಮಾಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ (Karnataka Lokayukta) ಬಲೆಗೆ ಬಿದ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಈರಣ್ಣ ಗಾಣಿಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಎಂಬುವವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಮನೆ ಹಾನಿಗೆ ಪರಿಹಾರ ನೀಡುವಂತೆ ಸಂಗಪ್ಪ ಅರ್ಜಿ ಸಲ್ಲಿಸಿದ್ದರು. ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು ಒಟ್ಟು 50 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದರು. ನ. 10 ರಂದು ಮುಂಗಡ ಹಣವಾಗಿ 20 ಸಾವಿರ ರೂ. ಹಣ ಪಿಡಿಒ ಪಡೆದ್ದರು. ಇಂದು ಮತ್ತೆ 20 ಸಾವಿರ ರೂ ಹಣ ಪಡೆಯುತ್ತಿದ್ದ ವೇಳೆ ಪಿಡಿಒ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಈ ಸಂಬಂಧ ಹಾವೇರಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಬಿಬಿಎಂಪಿ ಎ ಆರ್ ಓ ಪ್ರಸನ್ನ ಕುಮಾರ್ ಗೆ ನಾಲ್ಕು ವರ್ಷ ಜೈಲು, 40 ಲಕ್ಷ ದಂಡ
BIGG NEWS : ಎಚ್ಚರ !.. ಹೆಚ್ಚು ಮಧುಮೇಹಿಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಕರ್ನಾಟಕಕ್ಕೆ ಮೂರನೇ ಸ್ಥಾನ | diabetics