ಯಾದಗಿರಿ: ಆನೆಕಾಲು ರೋಗ ತಡೆಗಾಗಿ ಆರೋಗ್ಯ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ಸೇವಿಸೋದಕ್ಕೆ ನೀಡಲಾಗಿತ್ತು. ಹೀಗೆ ಸೇವಿಸಿದಂತ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರೋದಾಗಿ ತಿಳಿದು ಬಂದಿದೆ.
ಇಂದು ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿನ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಆನೆಕಾಲು ರೋಗ ತಡೆಗೆ ನೀಡುವಂತ ಮಾತ್ರೆಯನ್ನು ನೀಡಲಾಗಿತ್ತು. ಆರೋಗ್ಯ ಇಲಾಖೆಯಿಂದ ನೀಡಿದಂತ ಮಾತ್ರೆಯನ್ನು ಸೇವಿಸಿದಂತ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರೋ ಘಟನೆ ನಡೆದಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
‘ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಗೆದ್ದು ತೋರಿಸಲಿ’ : ಮಾಜಿ ಸಚಿವ K.S ಈಶ್ವರಪ್ಪ ಸವಾಲ್
ಇನ್ನೂ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಕ್ಕಳನ್ನು ವೈದ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವೈದ್ಯರನ್ನು ಮಕ್ಕಳ ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಪೋಷಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
BIG BREAKING NEWS: ಟೇಬಲ್ ಟೆನಿಸ್ ತಾರೆ ಅಚಂತ ಶರತ್ ಕಮಲ್ ಗೆ ಖೇಲ್ ರತ್ನ ಪ್ರಶಸ್ತಿ | Achanta Sharath Kamal