ಮೈಸೂರು: ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ನಾನು ಹೇಳಿದಂತೆ ನಾನೇ ತೆರವು ಮಾಡುತ್ತೇನೆ. ಆಗ ಬಸ್ ಸ್ಟ್ಯಾಂಡ್ ತೆರವು ಮಾಡವುದಿಲ್ಲ. ಬಸ್ ಸ್ಟ್ಯಾಂಡ್ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
BIGG NEWS: ಕೋಲಾರದಿಂದ ಸ್ಪರ್ಧಿಸಲು ಹೆಚ್ಚಿದ ಒತ್ತಡ; ಸಿದ್ದರಾಮಯ್ಯ ಸೋಲಿಸಲು ಸ್ವಪಕ್ಷ ಸೇರಿ ವಿಪಕ್ಷಗಳ ಪ್ಲಾನ್
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಇನ್ನೂ ಎರಡು ದಿನ ಬಾಕಿ ಇದೆ. ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ನಾನು ಹೇಳಿದಂತೆ ನಾನೇ ತೆರವು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.
BIGG NEWS: ಕೋಲಾರದಿಂದ ಸ್ಪರ್ಧಿಸಲು ಹೆಚ್ಚಿದ ಒತ್ತಡ; ಸಿದ್ದರಾಮಯ್ಯ ಸೋಲಿಸಲು ಸ್ವಪಕ್ಷ ಸೇರಿ ವಿಪಕ್ಷಗಳ ಪ್ಲಾನ್
ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು ಎಂದು ಪ್ರಶ್ನಿಸಿದ ಅವರು, ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್ಗೂ ವ್ಯತ್ಯಾಸ ಇಲ್ವಾ? ಅರಮನೆ ಗೋಪುರಕ್ಕೂ ಗುಂಬಜ್ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ. ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು, ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ ಎಂದು ಕಿಡಿಕಾರಿದರು.