ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮನವಿ ಮಾಡಿತ್ತು. ಆದರೆ ಈವರೆಗೆ ಕಂದಾಯ ಇಲಾಖೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
WATCH VIDEO: ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ ದುರಂತ: ಭಯಾನಕ ವಿಡಿಯೋ ಇಲ್ಲಿದೆ ನೋಡಿ
ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ಗಡುವು ಅಂತ್ಯವಾಗಿದ್ದು, ಈವರೆಗೆ ಕಂದಾಯ ಇಲಾಖೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ನಿಂದ ಮೂರು ದಿನಗಳ ಕಾಲ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟವು ಪತ್ರ ಬರೆದಿದೆ. ಈ ಬಗ್ಗೆ ಸೂಕ್ತ ಕ್ರಮ ಹಾಗೂ ತಮ್ಮ ನಿರ್ದೇಶನ ನೀಡುವಂತೆ ಕೋರಿ ಜಿಲ್ಲಾಧಿಕಾರಿಯವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಬರೆದ ಪತ್ರ ಬರೆದಿದ್ದಾರೆ.