ರಾಮನಗರ: ಕಂಚುಗಲ್ ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿತ್ತು. ಇದೀಗ ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ರಾಮನಗರ ಜಿಲ್ಲೆಯ ಕಂಚುಗಲ್ ಬಂಡೆಮಠದ ಬಸವಲಿಂಗಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಎ.1 ಆರೋಪಿಯಾಗಿ ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ, ಎ2 ಆರೋಪಿಯಾಗಿ ನೀಲಾಂಬಿಕೆ ಹಾಗೂ ಎ3 ಆರೋಪಿಯಾಗಿ ನಿವೃತ್ತ ಶಿಕ್ಷಕ ಮಹದೇವಯ್ಯ ಮಾಡಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ಕೂಡ ಕೋರ್ಟ್ ವಿಧಿಸಿತ್ತು.
BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ
ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಈ ಸಂಬಂಧದ ಅರ್ಜಿ ವಿಚಾರಣೆ ನಡೆಸಿದಂತ ರಾಮನಗರ ಜಿಲ್ಲಾ ನ್ಯಾಯಾಲಯವು, ಮೂವರು ಆರೋಪಿಗಳಿಗೆ ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಕೇಸ್ ನಲ್ಲಿ ಆರೋಪಿಗಳಾಗಿರುವಂತ ಮೂವರಿಗೆ ಜೈಲೇ ಗತಿ ಎನ್ನುವಂತೆ ಆಗಿದೆ.
ಶಿವಮೊಗ್ಗ: ನ.19ರಂದು ತೀರ್ಥಹಳ್ಳಿ ತಾಲೂಕಿನ ಬೆಕ್ಷೆ-ಕೆಂಜಿಗುಡ್ಡೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ‘ಗ್ರಾಮ ವಾಸ್ತವ್ಯ’