ಬೆಂಗಳೂರು: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಯಡಿ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಖರೀದಿಸಲು ಪಾಲಿಕೆಯಿಂದ ಫಲಾನುಭವಿಯ ವಂತಿಕೆ ಅಥವಾ ಗರಿಷ್ಠ 5 ಲಕ್ಷ ರೂ. ಹೊಂದಾಣಿಕೆ ಮೊತ್ತವನ್ನು ಫಲಾನುಭವಿ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗೆ ಪಾವತಿಸುವ ಯೋಜನೆಗೆ ದಿನಾಂಕ: 31-12-2022 ರವೆರೆ ಅರ್ಜಿ ಸಲ್ಲಿಸಬಹುದಾಗಿದೆ.
ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕವನ್ನು ಪಾವತಿಸಿ ಆನ್ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು, ಅರ್ಜಿಗಳನ್ನು ಸಲ್ಲಿಸಿ ಆನ್ಲೈನ್ ಮುಖೇನ ಕಾಲೋಚಿತಗೊಳಿಸಿ ದೃಢೀಕರಣಗಳನ್ನು ಪಡೆಯಬಹುದಾಗಿರುತ್ತದೆ.
BREAKING: ‘ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ’ದ ಅಧ್ಯಕ್ಷರನ್ನಾಗಿ ‘ಶಾಸಕ ಗೂಳಿಹಟ್ಟಿ ಶೇಖರ್’ ನೇಮಕ
ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಅವಧಿ ವಿಸ್ತರಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿ ಅಂಧರಿಗೆ ಸ್ಮಾರ್ಟ್ ಸ್ಟಿಕ್, ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್ಟಾಪ್ ಹಾಗೂ ಹಿರಿಯ ನಾಗರಿಕರಿಗೆ ಮಡಚುಬಹುದಾದ ವೀಲ್ ಚೇರ್ ಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 15-12-2022 ರವರೆಗೆ ವಿಸ್ತರಿಸಲಾಗಿದೆ.
ಕಲ್ಯಾಣ ಕಾರ್ಯಕ್ರಮಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 15-11-2022ರಂದು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ:15-12-2022ರವರೆಗೆ ವಿಸ್ತರಿಸಲಾಗಿರುತ್ತದೆ.