ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ, ಬೆಂಗಳೂರಿನಲ್ಲಿ ಮಹಿಳಾ ಕೆಎಎಸ್ ಅಧಿಕಾರಿಯೊಬ್ಬರು ( KAS Officer ) ಲೋಕಾಯುಕ್ತ ( Karnataka Lokayukta ) ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಇಂದು ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ ಕೊಡೋದಕ್ಕಾಗಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಸ್ಪಷಲ್ ತಹಶೀಲ್ದಾರ್ ವರ್ಷಾ ಒಡೆಯರ್ ಎಂಬ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಾರೆ.
BIG NEWS: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನ.21ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸ್ಪಷಲ್ ತಹಶೀಲ್ದಾರ್ ವರ್ಷಾ ಒಡೆಯರ್ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಸಿ ಕೊಡೋ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮನೆ ನಿರೀಕ್ಷೆಯಲ್ಲಿದ್ದ ಜನರಿಗೆ ಗುಡ್ ನ್ಯೂಸ್: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಗೆ ಅರ್ಜಿ ಆಹ್ವಾನ