ಉಡುಪಿ : ಹಿಜಾಬ್ ಬೆನ್ನಲ್ಲೇ ಉಡುಪಿ ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಭುಗಿಲೆದಿದ್ದು, ಇದೀಗ ಶಾಲಾ ಕ್ರೀಡಾಕೂಟದಲ್ಲಿ ಅಜಾನ್ ಗೆ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
BIG NEWS: ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಬೆದರಿಕೆ: ಕೆಲಸಕ್ಕೆ ರಾಜೀನಾಮೆ ಕೊಟ್ಟ ಐವರು ಸ್ಥಳೀಯ ಪತ್ರಕರ್ತರು
ಕುಂದಾಪುರದ ಶಂಕರನಾರಾಯಣದಲ್ಲಿ ಮದರ್ ತೆರೆಸಾ ಶಾಲೆಯಲ್ಲಿ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅಜಾನ್ ಗೆ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದ್ದು, ಶಾಲೆ ನಡೆ ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ ಆಯೋಜಿಸಿದ್ದ ಮದರ ತೆರೆಸಾ ಶಾಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಹಿಂದೂ, ಕ್ರೈಸ್ತ, ಮುಸ್ಲಿಂ ಧರ್ಮದ ನೃತ್ಯ ಮಾಡಿಸಿದ್ದಾರೆ. ಈ ವೇಳೆ ಅಜಾನ್ ಗೆ ವಿದ್ಯಾರ್ಥಿಗಳಿಂದ ಡ್ಯಾನ್ಸ್ ಮಾಡಿಸಲಾಗಿದ್ದು, ಹಿಂದೂಪರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.