ಬೆಂಗಳೂರು : ಶಸ್ತ್ರಚಿಕಿತ್ಸೆಗಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
BIGG BREAKING NEWS : ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಧರ್ಮ ದಂಗಲ್ : ಅಂದು ಹಿಜಾಬ್, ಇಂದು ಅಜಾನ್ ಡ್ಯಾನ್ಸ್ ವಿವಾದ!
ಕೋಟ ಶ್ರೀನಿವಾಸ ಪೂಜಾರಿ ಅವರು ಶಸ್ತ್ರ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ನಿನ್ನೆಯೇ ದಾಖಲಾಗಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವೈದ್ಯರು ನಿನ್ನೆಯೇ ಶಸ್ತ್ರಚಿಕಿತ್ಸೆ ಮಾಡಿದ್ದು, ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ ಎಂದು ಹೇಳಿದ್ದಾರೆ.
ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ.
— Kota Shrinivas Poojari (@KotasBJP) November 16, 2022