ಧಾರವಾಡ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ತಾಲಿಬಾನ್ ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಪಾಠ ಕಲಿಯಬೇಕು. ಪ್ರೀತಿ ಮಾಡುವಾಗ, ಡೇಟಿಂಗ್ ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಲಹೆ ನೀಡಿದ್ದಾರೆ.
ಉಪ್ಪು, ಅಡುಗೆಗೆ ಮಾತ್ರವಲ್ಲ..ವಾಸ್ತುದೋಷ ನಿವಾರಣೆಗೂ ಬಹಳ ಸಹಾಯಕಾರಿ…!
ನಗರದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಲಿವಿಂಗ್ ಟುಗೆದರ್ನಲ್ಲಿದ್ದ ಗೆಳತಿಯನ್ನು 35 ಪೀಸ್ಗಳಾಗಿ ಮಾಡಿ ಹತ್ಯೆಮಾಡಿರುವ ಘಟನೆ ತಾಲಿಬಾನಿಗಳ ಕೃತ್ಯಕ್ಕಿಂತೂ ಕೆಟ್ಟದಾದದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲವ್ ಜಿಹಾದ್ಗೆ ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ ದೆಹಲಿಯಲ್ಲಿ ನಡೆದ ಇದೊಂದು ಘಟನೆ ದೊಡ್ಡ ದುರಂತವೇ ಸರಿ ಎಂದಿದ್ದಾರೆ.