ಬೆಂಗಳೂರು : ಮೆಡಿಕಲ್ ಕಾಲೇಜುಗಳು ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಮೆಡಿಕಲ್ ಕಾಲೇಜುಗಳು ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ, ಹೆಚ್ಚುವರಿ ಶುಲ್ಕ ಸಂಗ್ರಹಿಸದಂತೆ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ. ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನು ಒಳಗೊಂಡ ವಿಭಾಗೀಯಪೀಠ ಆದೇಶ ಹೊರಡಿಸಿದೆ.
2017-18ರಲ್ಲಿ ಎಂಬಿಬಿಎಸ್ ಕೋರ್ಸ್ಗೆ ಸೇರಿದ್ದ ಅರ್ಜಿದಾರ ವಿದ್ಯಾರ್ಥಿಗಳು, 2017-2021ರ ಅವಧಿಯಲ್ಲಿ ಸಂಗ್ರಹಿಸಿದ ಹೆಚ್ಚುವರಿ ಶುಲ್ಕವನ್ನು ಮರುಪಾವತಿಸಲು ಕಾಲೇಜಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದ್ದರು.ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಿಂದ ಪಡೆದಿದ್ದ ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡುವಂತೆ ಸೂಚನೆ ನೀಡಿದೆ.