ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತವು ಮತ್ತೆ ಗ್ರೀನ್ ಸಿಗ್ನಲ್ ನೀಡಿದೆ.
ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳುಗಾರಿಕೆ ಪುನಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ
ಹೈಕೋರ್ಟ್ ತೀರ್ಪಿನಂತೆ ಸಿ ಆರ್ ಜೆಡ್ ವ್ಯಾಪ್ತಿಯಲ್ಲೂ ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ಕಲ್ಪಿಸಲು ಏಳು ಮಂದಿ ಸದಸ್ಯರ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.
ಸಿ ಆರ್ ಜೆಡ್ ವ್ಯಾಪ್ತಿಯಲ್ಲಿ ಪಾರಂಪರಿಕ ಕಾರ್ಮಿಕರಿಗೆ ಮಾತ್ರಅವಕಾಶ ನೀಡಲಾಗಿದೆ. ಯಾವುದೇ ಅಕ್ರಮ ನಡೆಸುವಂತಿಲ್ಲ, ಯಂತ್ರಗಳನ್ನು ಬಳಸುವಂತಿಲ್ಲ, ಮರಳು ದಿಬ್ಬಗಳ ಬಳಿ ಸಿಸಿಟಿವಿ ಅಳವಡಿಸಿ ನಿಗಾ ಇಡುತ್ತೇವೆ, ಆ್ಯಪ್ ಮೂಲಕ ಮಾತ್ರ ಮರಳು ಹಂಚಿಕೆಗೆ ಅವಕಾಶ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.
HEALTH TIPS: ‘ಶುಂಠಿ’ ಕೇವಲ ಅಡುಗೆ, ಕಷಾಯಕ್ಕೆ ಮಾತ್ರವಲ್ಲ ಮುಖದ ಕಾಂತಿ ಹೆಚ್ಚಿಸಲು ಸಹಾಯಕ| Ginger Skin Care