ಬೆಂಗಳೂರು : ವೋಟರ್ ಐಡಿ ಅಕ್ರಮದ ಹಿಂದೆ ಸಚಿವ ಅಶ್ವಥ್ ನಾರಾಯಣ್ ಕೈವಾಡವಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವರು ಕಾಂಗ್ರೆಸ್ ನಾಯಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲೇ ತುಂಬಿ ಹೋಗಿದ್ದಾರೆ. ಈ ರೀತಿ ಆರೋಪ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ. ಹೊಂಬಾಳೆ ಸಂಸ್ಥೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ , ಇವರಂತು ಒಳ್ಳೆ ಕೆಲಸ ಮಾಡುವುದಿಲ್ಲ, ಮಾಡುವವರಿಗೂ ಬಿಡುವುದಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
BIGG NEWS : ಸಿದ್ದರಾಮಯ್ಯ ಕ್ಷಮೆ ಕೇಳಲಿ, ಲೇಖಕರ ಬಂಧನವಾಗಲಿ : ಬಳ್ಳಾರಿಯಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ