ಬೆಂಗಳೂರು: ನವೆಂಬರ್ 21ರವರೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ( Congress Party ) ಅರ್ಜಿ ಸಲ್ಲಿಕೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ( Farmer CM HD Kumaraswamy ) ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಕ್ಕೆ ಡಿ.ಕೆ ಶಿವಕುಮಾರ್ ಅವರ ಬಾವ ಅರ್ಜಿಯನ್ನು ಸಲ್ಲಿಸಿದ್ದಾರೆ.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
ಇಂದು ಕೆಪಿಸಿಸಿ ಕಚೇರಿಗೆ ತೆರಳಿದಂತ ಡಿ.ಕೆ ಶಿವಕುಮಾರ್ ( DK Shivakumar ) ಅವರ ಬಾವ ಶರತ್ ಚಂದ್ರ ಅವರು, ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಹೀಗಾಗಿ ಮುಂಬರುವಂತ ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಚುನಾವಣೆ ತೀವ್ರ ಕುತೂಹಲವನ್ನು ಮೂಡಿಸಲಿದೆ.
ಅಂದಹಾಗೆ 2018ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ನಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಿದ್ದರೇ, ಬಿಜೆಪಿಯಿಂದ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ನಿಂದ ಹೆಚ್ ಎಂ ರೇವಣ್ಣ ಸ್ಪರ್ಧೆಗಿಳಿದಿದ್ದರು. ಈ ತೀವ್ರ ಪೈಪೋಟಿಯ ಕದನದಲ್ಲಿ ಕುಮಾರಸ್ವಾಮಿ ಗೆಲುವು ಕಂಡಿದ್ದರು.