ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಅವರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ( Primary School Teacher Recruitment ) ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇಂದು (ನ.18) ಸಂಜೆ 6 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ನಾಳೆ (ನ.18) ಸಂಜೆ 6 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.@BSBommai
— B.C Nagesh (@BCNagesh_bjp) November 17, 2022
ಅಂದಹಾಗೇ ನವೆಂಬರ್ 15, 2022ರಂದು ಶಿಕ್ಷಣ ಸಚಿವರು ಟ್ವಿಟ್ಟರ್ ನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ( Graduate Primary School Teachers Recruitment ) ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂಬುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಇಂದು ಸಂಜೆ 6 ಗಂಟೆಗೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವುದಾಗಿ ಮಾಹಿತಿ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು.
— B.C Nagesh (@BCNagesh_bjp) November 15, 2022