ಬೆಂಗಳೂರು : ರಾಜ್ಯದ ನಾನಾ ಜಿಲ್ಲೆಗಳಲ್ಲಿನ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 397 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು ಹಾಗೂ 158 ಕೋಟಿ ರೂ. ವೆಚ್ಚದಲ್ಲಿ 7 ತಾಯಿ ಹಾಗೂ ಮಕ್ಕಳ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳಕ್ಎ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆಯುಷ್ಮಾನ್ ಯೋಜನೆಯಡಿ ತೀರ್ವ ನಿಗಾಘಟಕ ಸ್ಥಾಪಿಸಲಾಗುತ್ತದೆ. ತುಮಕೂರು ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲಾಗುತ್ತದೆ. 56 ಕೋಟಿ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.
ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಪಕರಣ, ರೋಗ ಪತ್ತೆ ಕಿಟ್ ಖರೀದಿಗೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಇದಕ್ಕಾಗಿ 154 ಕೋಟಿ ವೆಚ್ಚದಲ್ಲಿ ಖರೀದಿಗೆ ಸಮ್ಮತಿಸಲಾಗಿದೆ ಎಂದರು.
ಎನ್ ಹೆಚ್ ಎಂ ಫಂಡ್ ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲಾಗುತ್ತದೆ. ಏಳು ಆಸ್ಪತ್ರೆಗಳಿಗೆ 158 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. ತಾಯಿ ಮತ್ತು ಮಗು ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತದೆ. ತರಿಕೆರೆಯಲ್ಲಿ 100 ಹಾಸಿಗೆ ತಾಯಿ ಮಗು ಆಸ್ಪತ್ರೆ ನಿರ್ಮಿಸಲಾಗುತ್ತದೆ. ಲಿಂಗಸುಗೂರಿನಲ್ಲಿ 50 ಹಾಸಿಗೆ ತಾಯಿಮಗು ಆಸ್ಪತ್ರೆ ನಿರ್ಮಿಸಲಾಗುವುದು. ಹರಿಹರದಲ್ಲಿ 50 ಹಾಸಿಗೆ ತಾಯಿ ಮಗು ಆಸ್ಪತ್ರೆ, ಗೋಕಾಕ್ ನಲ್ಲಿ 200 ಬೆಡ್ ತಾಯಿ ಮಗು ಆಸ್ಪತ್ರೆಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.