ಮುಂಬೈ : ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಇಂದು ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದಾರೆ, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Maharashtra | 5 died, 3 critically injured after a car hit another vehicle today morning on Mumbai Pune Expressway near Khopoli area. Four of them died on spot & one died on the way to the hospital. Injured persons were admitted to MGM Hospital in Kamothe, more details awaited. pic.twitter.com/J7YitElVtW
— ANI (@ANI) November 18, 2022