ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ.
BIGG NEWS: ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತನ ವಿರುದ್ಧ ದೂರು ದಾಖಲು
ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಆದರೆ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವರೂ ಆಗಿರುವ ಪಕ್ಷದ ಜ್ಯೋತಿಷಿ ‘ಎಚ್.ಡಿ.ರೇವಣ್ಣ’ ತಕರಾರು ಎತ್ತಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಹೇಳಿಕೆ ನೀಡಿದ ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಕರಾರು ತೆಗೆದಿದ್ದಾರೆ ಎಂದರು.
BIGG NEWS: ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತನ ವಿರುದ್ಧ ದೂರು ದಾಖಲು
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಚುನಾವಣೆಗೆ ಕಣಕ್ಕಿಳಿಯುವ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಸದ್ಯ ಪಟ್ಟಿ ಬಿಡುಗಡೆಗೆ ತಕರಾರರು ಬಂದ ಹಿನ್ನೆಲೆ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿಯೂ ಆಗಿರುವ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದರು.