ಮಹಾರಾಷ್ಟ್ರ: ಥಾಣೆ ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣದ ಪದಾಧಿಕಾರಿ ವಂದನಾ ಡೋಂಗ್ರೆ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗಾಂಧಿಯವರು ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಮೂಲಕ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 500 (ಮಾನನಷ್ಟ) ಮತ್ತು 501 (ಮಾನಹಾನಿಕರವೆಂದು ತಿಳಿದು ಮುದ್ರಣ ಅಥವಾ ಕೆತ್ತನೆ ವಿಷಯ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ಸಾವರ್ಕರ್ ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದರು. ಭಯದಿಂದ ಅವರಿಗೆ ಕ್ಷಮಾದಾನ ಅರ್ಜಿಯನ್ನು ಬರೆದರು. ಆ ಮೂಲಕ ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್, ಜವಾಹರಲಾಲ್ ನೆಹರು ಮತ್ತು ಇತರ ಸ್ವಾತಂತ್ರ್ಯ ಹೋರಾಟದ ನಾಯಕರಿಗೆ ದ್ರೋಹ ಬಗೆದರು ಎಂದು ವಾಗ್ದಾಳಿ ನಡೆಸಿದ್ದರು.
ರಾಹುಲ್ ಗಾಂಧಿ ಎರಡು ದಿನಗಳ ಹಿಂದೆ ವಾಶಿಮ್ ಜಿಲ್ಲೆಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಸಾವರ್ಕರ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಚಿಹ್ನೆ ಎಂದು ಹೇಳಿದ್ದರು.
ಬಿಜೆಪಿ ಮತ್ತು ಬಾಳಾಸಾಹೆಬಂಚಿ ಶಿವಸೇನೆ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣ, ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಟೀಕಿಸಿವೆ. ಉದ್ಧವ್ ಠಾಕ್ರೆ ಅವರ ಬಣವು ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಸಾವರ್ಕರ್ ವಿರುದ್ಧ ರಾಗಾ ಹೇಳಿಕೆಗಳನ್ನು ಅಸಮ್ಮತಿಸಿವೆ ಎನ್ನಲಾಗುತ್ತಿದೆ.
ಹಿಂದುತ್ವ ವಿಚಾರವಾದಿ ದಿವಂಗತ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಗುರುವಾರ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ತನ್ನ ಅಜ್ಜನನ್ನು ಅವಮಾನಿಸಿದ ಆರೋಪದ ಮೇಲೆ ಗಾಂಧಿ ವಿರುದ್ಧ ದೂರು ದಾಖಲಿಸಿದ್ದಾರೆ.