ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ಮುಂದುವರೆದಿದೆ.
ಇಂದು ಕೂಡ ಐಟಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆಯಿಂದ ದಾಳಿ ನಡೆಯುತ್ತಿದ್ದರು ಕೂಡ ಗಾಯತ್ರಿ ಶಾಂತೇಗೌಡ ಬೆಂಗಳೂರಿನಲ್ಲಿ ಇದ್ದು, ಇದುವರೆಗೂ ಮನೆಗೆ ಬಂದಿಲ್ಲ.
ದಾಳಿಯನ್ನು ವಿರೋಧಿಸಿ ನಿನ್ನೆ ಗಾಯತ್ರಿ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಅವರ ನಿವಾಸದ ಮುಂದಿನ ರಸ್ತೆಯ ಎರಡೂ ಕಡೆ ಪೊಲೀಸರು ಕಂಪ್ಲೀಟ್ ಬಂದ್ ಮಾಡಿದ್ದಾರೆ. ಸಾರ್ವಜನಿಕರು ಬರದಂತೆ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ.
ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ ಐಟಿ ಅಧಿಕಾರಿಗಳು ನಡೆಸಿದ್ದಾರೆ. ನಿನ್ನೆ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದು,. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
ವಿದ್ಯುತ್ ಬಿಲ್ ಕಟ್ಟದ ಸರ್ಕಾರಿ ಕಚೇರಿಗಳಿಗೆ BESCOM ಬಿಗ್ ಶಾಕ್: ಬಿಬಿಎಂಪಿ, BWSSBಗೆ ಬಾಕಿ ಪಾವತಿಗೆ ನೋಟಿಸ್
ಶಿವಮೊಗ್ಗ: ಅಡಿಕೆಗೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಎಲ್ಲಾ ನೆರವು – DC ಡಾ. ಎಸ್.ಸೆಲ್ವಕುಮಾರ್ ಸೂಚನೆ