ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಕಿಡಿಕಾರಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ? 5/8#OperationVoter
— Siddaramaiah (@siddaramaiah) November 18, 2022
ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? 6/8#OperationVoter
— Siddaramaiah (@siddaramaiah) November 18, 2022
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು. 8/8#OperationVoter
— Siddaramaiah (@siddaramaiah) November 18, 2022