ಕೋಲಾರ : ಕಾಂಗ್ರೆಸ್ ನಾಯಕರ ಕುತಂತ್ರದಿಂದ ನಮ್ಮ ಅಭ್ಯರ್ಥಿಗಳು ಸೋತಿದ್ದು, ಇಲ್ಲದಿದ್ದರೆ ನಾವು ಕಳೆದ ಚುನಾವಣೆಯಲ್ಲಿ 75 ಸ್ಥಾನ ಗೆಲ್ಲುತ್ತಿದ್ದೆವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ಹೊರವಲಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನಮ್ಮ ಸೋಲಿಗೆ ಕಾಂಗ್ರೆಸ್ ನಾಯಕರ ಕುತಂತ್ರವೇ ಕಾರಣ, ಇಲ್ಲದಿದ್ದರೆ ನಾವು ಕಳೆದ ಚುನಾವಣೆಯಲ್ಲಿ 75 ಸ್ಥಾನ ಗೆಲ್ಲುತ್ತಿದ್ದೆವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ಹೊರವಲಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ‘ ಈ ಬಾರಿ ಚುನಾವಣೆಯಲ್ಲಿ 123 ಸ್ಥಾನದ ಗುರಿ ಹೊಂದಿದ್ದೇವೆ, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರು. ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ನಾನು ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೆ ಹೋಗಿಲ್ಲ, ನನ್ನ ಶಕ್ತಿ ನೋಡಿ ಅವರೇ ( ಕಾಂಗ್ರೆಸ್) ಬಂದರು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ಹೊರವಲಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನಾನು ಅಧಿಕಾರಕ್ಕಾಗಿ ಯಾರ ಮನೆ ಬಾಗಲಿಗೆ ಹೋಗಿಲ್ಲ, ನನ್ನ ಶಕ್ತಿ ನೋಡಿ ಅವರೇ ನಮ್ಮ ಮನೆ ಬಾಗಿಲಿಗೆ ( ಕಾಂಗ್ರೆಸ್) ಬಂದರು, ಈ ದರಿದ್ರ ಸರ್ಕಾರ ಜನರ ಜೊತೆ ಚೆಲ್ಲಾಟವಾಡಲು ಕಾಂಗ್ರೆಸ್ ಕಾರಣ ಎಂದರು.
ಕೈ ನಾಯಕರ ಕುತಂತ್ರದಿಂದ ನಮ್ಮ ಅಭ್ಯರ್ಥಿಗಳು ಸೋತಿದ್ದು, ಇಲ್ಲದಿದ್ದರೆ ನಾವು ಕಳೆದ ಚುನಾವಣೆಯಲ್ಲಿ 75 ಸ್ಥಾನ ಗೆಲ್ಲುತ್ತಿದ್ದೆವು ಎಂದರು.ಇಂದೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಬೇಕಿತ್ತು, ಆದರೆ ಇಂದು ದಿನ ಸರಿಯಿಲ್ಲ ಎಂದು ರೇವಣ್ಣ ಹೇಳಿದರು, ಆದ್ದರಿಂದ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ಯೋಜನೆ ಜೂನ್ 2025 ರೊಳಗೆ 175 ಕಿ.ಮೀ ಟ್ರ್ಯಾಕ್ ಪೂರ್ಣ – BMRC ಎಂಡಿ