ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿ ಖಾಸಗಿ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
BIGG NEWS : ಕೆ.ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7 ನೇ ವೇತನ ಆಯೋಗ ರಚನೆಗೆ ಅನುಮೋದನೆ : ಮೂವರು ಸದಸ್ಯರ ನೇಮಕ
ವಿತ್ ವಾರೆಂಟ್ ಕಚೇರಿ ಮೇಲೆ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಇಡೀ ಕಚೇರಿ ಜಾಲಾಡಿದ್ದಾರೆ. ಸದ್ಯ, ಇದೀಗ ಪರಿಶೀಲನೆ ಮುಕ್ತಾಯವಾಗಿದ್ದು, ಸತತ 4 ಗಂಟೆ ಕಚೇರಿ ಜಾಲಾಡಿ ಮೂರು ಪ್ರಿಂಟರ್, ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್ ಸೇರಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಮೂರು ವಿಶೇಷ ತಂಡವನ್ನು ರಚಿಸಲಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಾರಥ್ಯ ವಹಿಸಿದ್ದಾರೆ. ಪ್ರಕರಣ ಸಂಬಂಧ ಮಲ್ಲೇಶ್ವರಂ ನ ಚಿಲುಮೆ ಸಂಸ್ಥೆಯ ಬ್ಯುಸಿನೆಸ್ ಹೆಡ್ ಸುಧಾಕರ್ ಹಾಗೂ ಕಚೇರಿ ವರ್ಕರ್ ರಕ್ಷಿತ್ ಎಂಬುವವರು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಬಿಬಿಎಂಪಿಯ ಜಂಟಿ ಆಯುಕ್ತ ರಂಗಪ್ಪ ಅವರು ಚಿಲುಮೆ ಸಂಸ್ಥೆಯ ವಿರುದ್ಧ ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿನ ಅಕ್ರಮ ಸಂಬಂಧ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.