ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದಾರೆ. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿವೆ.
BIGG NEWS : ಇಂದು ಪಿಜಿ ಸಿಇಟಿ/ಡಿಸಿಇಟಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಈ ಕುರಿತಂತೆ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆನ್ ಲೈನ್ ಮೂಲಕ ದಿನಾಂಕ 21-03-2022 ರಿಂದ 22-04-2022ರವರೆಗೆ ಅವಕಾಶ ನೀಡಲಾಗಿತ್ತು ಎಂದು ಹೇಳಿದೆ.
ಇನ್ನೂ 15,000 ಶಾಲಾ ಶಿಕ್ಷಕರ ಹುದ್ದೆಗಳಿಗಾಗಿ ಒಟ್ಟು 1,16,223 ಮಂದಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 21-05-2022 ಹಾಗೂ 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ 68,849 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 51,098 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದರು ಎಂದು ತಿಳಿಸಿದೆ.
BIGG NEWS : ಡಿಜಿಟಲ್ ಜೀವಂತ ಪ್ರಮಾಣ ಪತ್ರ : `EPFO’ ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ 1:2 ಅನುಪಾತದಂತೆ 22,432 ಅಭ್ಯರ್ಥಿಗಳ ದಾಖಲಾತಿಯನ್ನು ಪರಿಶೀಲನೆ ನಡೆಸಲಾಯಿತು. ಇಂದು 1:1 ಅನುಪಾತದಂತೆ ಆಯ್ಕೆಯಾಗಿರುವಂತ 13,363 ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಯ ಬಗ್ಗೆ ಆಯಾ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಲು ದಿನಾಂಕ 19-11-2022 ರಿಂದ 23-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ವಿಷಯವಾರು 1:1 ಪಟ್ಟಿಯಲ್ಲಿ ಆಯ್ಕೆಯಾದ ಹುದ್ದೆಗಳ ವಿವರ
- ಆಂಗ್ಲಭಾಷೆಯ 1,807 ಹುದ್ದೆಗಳಿಗೆ 1,768 ಮಂದಿ ಆಯ್ಕೆಯಾಗಿದ್ದಾರೆ.
- ಗಣಿತ ಮತ್ತು ವಿಜ್ಞಾನ ಹುದ್ದೆಗೆ 6,500ರಲ್ಲಿ 5,450 ಮಂದಿ ಆಯ್ಕೆ
- ಸಮಾಜ ಪಾಠ 4,693 ಹುದ್ದೆಗಳಿಗೆ 4,521 ಮಂದಿ ಆಯ್ಕೆ
- ಜೀವ ವಿಜ್ಞಾನ ವಿಷಯದ 2000 ಹುದ್ದೆಗಳಿಗೆ 1,624 ಮಂದಿ ಆಯ್ಕೆ
ಹೀಗೆ ಒಟ್ಟು 15,000 ಪದವೀಧರ ಪ್ರಾಥಮಿಕ ಶಾಲಾ ಶೀಕ್ಷಕರ ಹುದ್ದೆಗಳಿಗೆ ಒಟ್ಟು 13,363 ಮಂದಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳೇ ಇಲ್ಲವಾಗಿದೆ. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ