ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ, ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ನೇಮಕಾತಿಗೆ ತಡೆ ನೀಡಲಾಗಿದೆ.
ಈ ಕುರಿತು ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಪರಿಷ್ಕೃತ ಮೀಸಲಾತಿ ಅನುಷ್ಠಾನಗೊಳ್ಳುವವರೆಗೆ ನೇರ ನೇಮಕಾತಿ ತಡೆ ಹಿಡಿಯಬೇಕು. ಜೊತೆಗೆ ಮೀಸಲಾತಿ ಅನ್ವಯ ಮುಂಬಡ್ತಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಲಾಖಾ ಮುಂಬಡ್ತಿ ಸಮಿತಿ ಸಭೆ ನಡೆಸಬಾರದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಎಸ್ ಸಿ ಮೀಸಲಾತಿಯನ್ನು ಶೇ. 15 ರಿಂದ 17 ಕ್ಕೆ ಹಾಗೂ ಎಸ್ ಟಿ ಮೀಸಲಾತಿಯನ್ನು ಶೇ. 3 ರಿಂದ 7 ಕ್ಕೆ ಹೆಚ್ಚಳ ಮಾಡಿದೆ. ಇದರಿಂದ ರೋಸ್ಟರ್ ಬಿಂದುವಿನಲ್ಲಿ ವ್ಯತ್ಯಾಸ ಉಂಟಾಗಿದ್ದು, ಈ ವ್ಯತ್ಯಾಸಗಳನ್ನು ಸರಿಪಡಿಸುವವರೆಗೂ ಸರ್ಕಾರಿ ನೌಕರರ ಮೀಸಲಾತಿಗೆ ತಡೆ ನೀಡಲಾಗಿದೆ.
BIGG NEWS : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿ : ಇಂದಿನ ಬ್ಯಾಂಕ್ ನೌಕರರ ಮುಷ್ಕರ ರದ್ದು