ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿಯ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
BIGG NEWS: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ; ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ
ಇದೇ ತಿಂಗಳು 21 ರಂದು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬಿಜೆಪಿಯು ಬಿಆರ್ಎಸ್ ಪಕ್ಷದ ಶಾಸಕರನ್ನು ಖರೀದಿಸಲು ಮುಂದಾದ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ ನಡೆಸಲು ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ಏಳು ಸದಸ್ಯರನ್ನೊಳಗೊಂಡ ವಿಶೇಷ ತಂಡ ರಚಿಸಿತ್ತು.
BIGG NEWS: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ; ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ
ಈ ತಂಡ ಸೆಕ್ಷನ್ 41 (ಎ) ಅಡಿಯಲ್ಲಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್ ನೀಡಿದೆ. ಸಂತೋಷ್ ಅವರು ಹೇಳಿದ ದಿನಾಂಕ ಮತ್ತು ಸಮಯದಂದು ಎಸ್ಐಟಿ ಮುಂದೆ ಹಾಜರಾಗಲು ವಿಫಲವಾದರೆ ಅವರನ್ನು ಬಂಧಿಸಲಾಗುವುದು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.