ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಜೆಡಿಎಸ್ ಈಗಾಗಲೇ ಪಂಚರತ್ನ ರಥರಾತ್ರೆ ಆರಂಭಿಸಿದೆ. ಈ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ಪಕ್ಷಕ್ಕೆ ಶಾಸಕ ಶಿವಲಿಂಗೇಗೌಡರು ಗುಡ್ ಬೈ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.
BIGG NEWS: ಮತದಾರರ ಪಟ್ಟಿ ಕಳವು ಆರೋಪ:ಚಿಲುಮೆ ಸಂಸ್ಥೆ ಜೊತೆ ರಾಜಕಾರಣಿಗಳೂ ಶಾಮೀಲು!
ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಬರಲು ಒಪ್ಪಿಕೊಂಡಿದ್ದಾರೆ. ಶಿವಲಿಂಗೇಗೌಡರನ್ನು ಕಾಂಗ್ರೆಸ್ಗೆ ಸೆಳೆಯುವಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಶಿವಲಿಂಗೇಗೌಡರು ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.
ಇನ್ನೂ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಇದೀಗ ಜೆಡಿಎಸ್ ಶಾಸಕ ಶಿವಲಿಂಗೇಗೌಡರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.