ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಂಡಿದೆ.
BIGG NEWS: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ; ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ
ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದೆ. ಇದಕ್ಕಾಗಿ ಶ್ರೀ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದೇವಸ್ಥಾನ, ಮುಖ್ಯದ್ವಾರ ಸಹಿತ ದೇವಳದ ನಾಲ್ಕು ಸುತ್ತಿನಲ್ಲಿ ವಿದ್ಯುತ್ ದೀಪಗಳಿಂದ ಶ್ರೀ ಕ್ಷೇತ್ರ ಕಂಗೊಳಿಸುತ್ತಿದೆ.
ಐದು ದಿನಗಳ ಕಾಲ (ನ.19ರಿಂದ ನ.23) ಅದ್ಧೂರಿಯಾಗಿ ನಡೆಯುವ ಧರ್ಮಸ್ಥಳದ ಲಕ್ಷದೀಪೋತ್ಸವದ ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಧರ್ಮಸ್ಥಳ ಶ್ರೀ.ಧ.ಮಂ. ಶಾಲಾ ಮೈದಾನದಲ್ಲಿ ವಸ್ತುಪ್ರದರ್ಶನ ಮಳಿಗೆಗಳು ಸಿದ್ಧವಾಗಿವೆ. ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಧರ್ಮಾಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಹೊಸ ಕಟ್ಟೆ ಉತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆಗೊಳ್ಳಲಿದೆ.