ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಅಕ್ರಮ ಸಂಗ್ರಹ ಆರೋಪದ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗಕ್ಕೆ ಶನಿವಾರ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದರು.
BIGG NEWS: ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ ಆರಂಭ:ಭಕ್ತರ ಕಣ್ಮನ ಸೆಳೆಯಲು ವಿದ್ಯುತ್ ಅಲಂಕಾರ
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ದೂರು ಸಲ್ಲಿಸಿತು. ಮಾಜಿ ಸಚಿವ ಕೃಷ್ಣ ಬೈರೇಗೌಡ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕರಾದ ಸೌಮ್ಯ ರೆಡ್ಡಿ, ರಿಜ್ವಾನ್ ಹರ್ಷದ್ ಸಾಥ್ ನೀಡಿದರು.