ನವದೆಹಲಿ: ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯೋಗದಲ್ಲಿ ಚುನಾವಣಾ ಆಯುಕ್ತರಾಗಿ ನೇಮಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅರುಣ್ ಗೋಯಲ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಳ್ಳಬೇಕಾಗುತ್ತದೆ ಎಂದು ಈ ಸಂಬಂಧ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ. ಅರುಣ್ ಗೋಯಲ್ ಅವರು 1985ರ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ