ಚಿಕ್ಕಬಳ್ಳಾಪುರ: ಮೊಬೈಲ್ನಲ್ಲಿ ಮಾತನಾಡುತ್ತಾ ಡ್ರೈವಿಂಗ್ ಮಾಡುತ್ತಿದ್ದ ಪರಿಣಾಮ ಖಾಸಗಿ ಬಸ್ವೊಂದು ಪಲ್ಟಿಯಾದ ಪರಿಣಾಮ ಘಟನೆಯಲ್ಲಿ 40 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ ನಡೆದಿದೆ.
ಭಾರತಿ ಎನ್ನುವ ಹೆಸರಿನ ಖಾಸಗಿ ಬಸ್ ಹಿಂದೂಪುರ-ತಿರುಪತಿ ಮಾರ್ಗವಾಗಿ ಸುಮಾರು 40 ಕ್ಕೂ ಹೆಚ್ಚು ನಿನ್ನೆ ರಾತ್ರಿ ಪಲ್ಟಿ ಹೊಡೆದಿದೆ. ಘಟನೆಗೆ ಡ್ರೈವರ್ ಅಚಾತುರ್ಯವೆ ಕಾರಣ ಎನ್ನಲಾಗಿದೆ. ಈ ನಡುವೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.