ಬೆಂಗಳೂರು : ಬೆಂಗಳೂರಿನಲ್ಲಿ ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
WATCH VIDEO: ಗುಜರಾತ್ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಕರಣ ಸಂಬಂಧ ಡಿಜಿಟಲ್ ಸಮೀಕ್ಷಾ ಆ್ಯಪ್ ಅಭಿವೃದ್ಧಿ ಪಡಿಸಿದ್ದ ಸಂಜೀವ್ ಶೆಟ್ಟಿ ಎಂಬ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಮೂರು ವಿಶೇಷ ತಂಡವನ್ನು ರಚಿಸಲಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಾರಥ್ಯ ವಹಿಸಿದ್ದಾರೆ. ಪ್ರಕರಣ ಸಂಬಂಧ ಮಲ್ಲೇಶ್ವರಂ ನ ಚಿಲುಮೆ ಸಂಸ್ಥೆಯ ಬ್ಯುಸಿನೆಸ್ ಹೆಡ್ ಸುಧಾಕರ್ ಹಾಗೂ ಕಚೇರಿ ವರ್ಕರ್ ರಕ್ಷಿತ್ ಎಂಬುವವರು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಬಿಬಿಎಂಪಿಯ ಜಂಟಿ ಆಯುಕ್ತ ರಂಗಪ್ಪ ಅವರು ಚಿಲುಮೆ ಸಂಸ್ಥೆಯ ವಿರುದ್ಧ ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿನ ಅಕ್ರಮ ಸಂಬಂಧ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.