ಬೆಂಗಳೂರು : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಹೇಳಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು.#ManagaluruBlast
1/2— Siddaramaiah (@siddaramaiah) November 20, 2022
ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.
ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ
ಕೇಳಿಕೊಳ್ಳುತ್ತಿದ್ದೇನೆ.#MangaluruBlast
2/2— Siddaramaiah (@siddaramaiah) November 20, 2022