ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಈ ಪ್ರಕರಣದ ತನಿಖೆ ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಲು ನಿರ್ಧರಿಸಿದ್ದಾರೆ. ಮತ್ತೊಮ್ಮೆ ನಾಳೆ (ನ.21) ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ಮೂವರು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ಪಾಕ್ ಪರ ಘೋಷಣೆ ಹಿಂದೆ ಯಾವುದಾದರೂ ಸಂಘಟನೆಯ ಕೈವಾಡವಿದೆಯಾ..? ವಿದ್ಯಾರ್ಥಿಗಳಿಗೆ ಪಾಕ್ ಸಂಘಟನೆಯ ನಂಟಿದೆಯಾ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಾಗೆಯೇ ಮೂವರು ವಿದ್ಯಾರ್ಥಿಗಳ ಮೊಬೈಲ್ ದಾಖಲೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರ ಮೂಲದ ರಿಯಾ ರವಿಚಂದ್ರನ್ ಮತ್ತು ಪಂಜಾಬ್ನ ದಿನಕರ್ ಪಾಕಿಸ್ತಾನ ಜಿಂದಾಬಾದ್ (Pakistan zindabad) ಎಂದು ಪಾಕ್ ಪರ ಘೋಷಣೆ ಕೂಗಿದ್ದರು.ನಂತರ ಈ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಮಾರತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದ್ದರು ಮತ್ತು ತಮಾಷೆಗಾಗಿ ಪಾಕ್ ಪರ ಘೋಷಣೆ ಕೂಗಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದರು.
‘ನಾವು ಮೀಸಲಾತಿ ಹೆಚ್ಚಳ ಮಾಡಿದ್ದೀವಿ, ತಾಕತ್ತಿದ್ರೆ ತಡೀರಿ’ : ಸಚಿವ ಶ್ರೀರಾಮುಲು ಸವಾಲ್ |Sri Ramulu
BIGG NEWS : ‘PFI’ ನಿಷೇಧಕ್ಕೆ ಪ್ರತೀಕಾರವಾಗಿ ಮಂಗಳೂರು ಆಟೋ ಸ್ಪೋಟ : ಪೊಲೀಸರಿಂದ ತೀವ್ರ ತನಿಖೆ