ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಪಕ್ಷ (JDS Party ) ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಎಲ್ಲಾ ಸ್ತ್ರೀಶಕ್ತಿ ಸಂಗಗಳ ಸಾಲಮನ್ನ ಮಾಡಲಾಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
BREAKING NEWS: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಣ: ಈ ಜಾಲವನ್ನು ಸರ್ಕಾರ ಬೇಧಿಸಲಿದೆ – CM ಬೊಮ್ಮಾಯಿ
ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ರಥಯಾತ್ರೆಯನ್ನು ಆರಂಭಿಸಿದ್ದೇವೆ. ಬದಲಾವಣೆ ತರಲು ಪ್ರಾಮಾಣಕ ಹೋರಾಟಕ್ಕೆ ಮುಂದಾಗಿದ್ದೇನೆ ಎಂದರು.
‘ಸಾಮಾನ್ಯ ಸಂವಹನ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮೋದನೆ ; ‘ಸಮುದ್ರ ಮಾರ್ಗ’ ಮೇಲ್ವಿಚಾರಣೆಗೆ ಏಜೆನ್ಸಿಗಳು ಸಜ್ಜು
ಕನಿಷ್ಠ 123 ಸ್ಥಾನಗಳಲ್ಲಿ ಗೆದ್ದು ಕನಸಿನ ರಾಮ ರಾಜ್ಯವನ್ನು ಸ್ಥಾಪಿಸುತ್ತೇನೆ. ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಬೇಕೆಂಬ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದರು.
ಶೈಕ್ಷಣಿಕ ಪ್ರಗತಿಯನ್ನು ರಾಜ್ಯದಲ್ಲಿ ಸಾಧಿಸೋ ಸಲುವಾಗಿ ಖಾಸಗಿ ಶಾಲೆಗಳಿಗಿಂತ ಉತ್ತಮ ಶಾಲೆಗಳನ್ನು ಸ್ಥಾಪನೆ ಮಾಡುವಂತ ಗುರಿಯನ್ನು ಹೊಂದಿದ್ದೇನೆ. ಸ್ತ್ರೀಶಕ್ತಿ ಸಂಘಗಳಿಗೆ ನೆರವಾಗೋ ನಿಟ್ಟಿನಲ್ಲಿ ನಮ್ಮ ಸರ್ಕಾರ ಬಂದರೇ 24 ಗಂಟೆಯಲ್ಲೇ ಸಾಲಮನ್ನಾ ಮಾಡಲಾಗುತ್ತದೆ ಎಂದು ಘೋಷಿಸಿದರು.