ಕೊಪ್ಪಳ : ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ.
ಕೊಪ್ಪಳದ ವನಬಳ್ಳಾರಿ ಗ್ರಾಮದ ಮದುವೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದಾರೆ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಕಾಣಿಸಿಕೊಂಡಿದ್ದು, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ.
ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕ್ವಾಲ್ ಅನ್ಸಾರಿಗೆ ಮತ ನೀಡುವಂತೆ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ.
ಇನ್ನೂ, ಹೆಲಿಕಾಪ್ಟರ್ ನಲ್ಲಿ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳದ ವನಬಳ್ಳಾರಿ ಗ್ರಾಮದ ಮದುವೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.ಸಿದ್ದರಾಮಯ್ಯರು ಇಂದು 2:45 ರ ವೇಳೆಗೆ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಂತೆ ಜನರು ಜಮಾಯಿಸಿದ್ದು, ತಾ ಮುಂದು ತಾ ಮುಂದು ಎಂದು ಬಂದ ಸಾವಿರಾರು ಜನರು ಹೆಲಿಪ್ಯಾಡ್ ಗೆ ನುಗ್ಗಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
‘ಚಿಲುಮೆ’ ಮೊಬೈಲ್ ಆ್ಯಪ್ ಡೆವಲಪರ್ ಪೊಲೀಸ್ ವಶಕ್ಕೆ ; ತೀವ್ರ ವಿಚಾರಣೆ |Voter ID Scam
ಮತದಾರರ ಮಾಹಿತಿ ಕಳ್ಳತನ ನಿಮಗೆ ಹಾಸ್ಯಾಸ್ಪದವೇ? : ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್