ವೈಶಾಲಿ (ಬಿಹಾರ): ಬಿಹಾರದ ವೈಶಾಲಿಯ ಮೆಹನಾರ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಕ್ಕಳು ಸೇರಿ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಧಾರ್ಮಿಕ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಜನರು ಸ್ಥಳೀಯ ದೇವರಿಗೆ ಪ್ರಾರ್ಥನೆ ಸಲ್ಲಿಸಲು ರಸ್ತೆಬದಿಯಲ್ಲಿರುವ “ಪೀಪಲ್” ಮರದ ಮುಂದೆ ಜಮಾಯಿಸಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಟ್ರಕ್ ಅಲ್ಲಿದ್ದ ಜನರಿಗೆ ಗುದ್ದಿದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಕ್ಕೆ ₹ 2 ಲಕ್ಷ ಹಾಗೂ ಗಾಯಗೊಂಡವರಿಗೆ ₹ 50,000 ಪರಿಹಾರ ಘೋಷಿಸಿದ್ದಾರೆ.
“ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತವು ನನಗೆ ಬಹಳ ದುಃಖಕರವಾಗಿದೆ. ಮೃತರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ PMNRF (ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ) ನಿಂದ ₹ 2 ಲಕ್ಷ ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ ₹ 50,000 ನೀಡಲಾಗುವುದು” ಎಂದು ಪ್ರಧಾನಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
The accident in Vaishali, Bihar is saddening. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) November 20, 2022
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅಪಘಾತದ ವರದಿಗಳು “ಅತ್ಯಂತ ನೋವಿನಿಂದ ಕೂಡಿದೆ” ಎಂದು ಹೇಳಿದ್ದಾರೆ.
वैशाली, बिहार में हुई सड़क दुर्घटना में बच्चों समेत कई लोगों के हताहत होने की ख़बर अत्यंत पीड़ादायक है। मैं इस हादसे में अपने प्रियजनों को खोने वाले परिवारों के प्रति गहन शोक-संवेदनाएं व्यक्त करती हूं तथा घायल हुए लोगों के शीघ्र स्वस्थ होने की कामना करती हूं।
— President of India (@rashtrapatibhvn) November 20, 2022
BIGG NEWS : ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ
BIGG NEWS : ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ