ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಆಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ನಿರ್ದೇಶಕ ರವಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ನೆಲಮಂಗಲ ಹೊರವಲಯದಲ್ಲಿ ಹಲಸೂರು ಗೇಟ್ ಪೊಲೀಸರು ನಿನ್ನೆ ತಡರಾತ್ರಿ ಚಿಲುಮೆ ಸಂಸ್ಥೆಯ ನಿರ್ದೇಶಕ ರವಿಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಈಗಾಗಲೇ ಪ್ರಸಾದ್, ಧರ್ಮೇಶ್, ಸಂಸ್ಥೆಯ ನಿರ್ದೇಶಕ ಕೆಂಪೇಗೌಡ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವಿಶೇಷಷ ತಂಡ ರಚಿಸಲಾಗಿದ್ದು, ಹೊರ ರಾಜ್ಯಗಳಿಗೆ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ. ಕಾಡುಗೋಡಿ ಠಾಣೆಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದ ಆರೋಪಿ ಲೋಕೇಶ್ ಬಂಧನಕ್ಕೆ ವೈಟ್ ಫೀಲ್ಡ್ ವಿಭಾಗದ ಪೊಲೀಸರು ಶೋಧ ನಡೆಸುತ್ತಿದ್ದಾರೆ.