ಬೆಂಗಳೂರು : ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ್ ( U.B Banakar) ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ತೊರೆದ ಬಣಕಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅಂದಹಾಗೆ, ಯು,ಬಿ ಬಣಕಾರ್ ಸಚಿವ ಬಿ,ಸಿ ಪಾಟೀಲ್ ವಿರುದ್ಧ ಹಾವೇರಿ ಜಿಲ್ಲೆಯ ಹಿರೇಕೆರೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಕೆಂಗಡಿಸಿದ ಕೆಂಗಣ್ಣು ಕಾಯಿಲೆ : `ಮದ್ರಾಸ್ ಐ’ ರೋಗದ ಲಕ್ಷಣಗಳೇನು? ಸೋಂಕು ಬರದಂತೆ ತಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಇತ್ತೀಚೆಗಷ್ಟೇ ಮಾಜಿ ಶಾಸಕ ಯು.ಬಿ ಬಣಕಾರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ , ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೂ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದರು. ರಾಜಕೀಯ ಬೆಳವಣಿಗೆಗೆ ಬೇಸತ್ತು ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು, ಬಿಜೆಪಿ ತೊರೆದ ಬಣಕಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.